- Advertisement -
- Advertisement -



ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಕುರುಕುಂದಾ ಗ್ರಾಮದಲ್ಲಿ ನೀರು ಕುಡಿಯಲು ಹೋದ ವಿದ್ಯಾರ್ಥಿನಿ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಶುಕ್ರವಾರ(ಜ.30) ನಡೆದಿದೆ. ಶಾಲೆಯ ಸಿಬ್ಬಂದಿಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂಬ ಆಕ್ರೋಶ ವ್ಯಕ್ತವಾಗಿದೆ.
5ನೇ ತರಗತಿಯ ತನುಶ್ರೀ(11) ಮೃತಪಟ್ಟ ವಿದ್ಯಾರ್ಥಿನಿ. ಗ್ರಾಮದ ಹರಿಜನ ವಾರ್ಡ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು,. ಶುಕ್ರವಾರ ಮಧ್ಯಾಹ್ನ ಊಟದ ಸಮಯದಲ್ಲಿ ಶಾಲೆಯ ಆವರಣದಲ್ಲಿದ್ದ ಕುಡಿಯುವ ನೀರಿನ ಶುದ್ಧೀಕರಣ ಘಟಕದಲ್ಲಿ ನೀರು ಕುಡಿಯಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಈ ಘಟನೆಗೆ ಅಧಿಕಾರಿಗಳು ಮತ್ತು ಶಾಲಾ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
- Advertisement -








