Friday, September 4, 2026
spot_imgspot_img
spot_imgspot_img

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೇರಳದಲ್ಲಿ ಬಂಧನ

- Advertisement -
- Advertisement -

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ಅ.ಕ್ರ. 69/2019 ಪ್ರಕರಣದಲ್ಲಿ 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಕೇರಳ ರಾಜ್ಯದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಸದರಿ ಪ್ರಕರಣವು ಐಪಿಸಿ ಕಲಂ 409, 420, 507 ಹಾಗೂ 34 ಅನ್ವಯ ದಾಖಲಾಗಿತ್ತು. ಪ್ರಕರಣ ದಾಖಲಾಗಿದ ದಿನದಿಂದಲೇ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದ ಹಿನ್ನೆಲೆ, ಮಾನ್ಯ ನ್ಯಾಯಾಲಯವು ಆತನ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಿತ್ತು. ಆದರೂ ಆರೋಪಿ ಪತ್ತೆಯಾಗದೆ ತಲೆಮರೆಸಿಕೊಂಡಿದ್ದರಿಂದ, ಈ ಪ್ರಕರಣದಲ್ಲಿ absconding charge sheet ಕೂಡ ಸಲ್ಲಿಸಲಾಗಿತ್ತು.
ಇಂದು (03/02/2026) ಮಾನ್ಯ ಸಹಾಯಕ ಪೊಲೀಸ್ ಆಯುಕ್ತರು, ದಕ್ಷಿಣ ಉಪವಿಭಾಗ ಹಾಗೂ ಕಂಕನಾಡಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಠಾಣಾ ಸಿಬ್ಬಂದಿಗಳಾದ HC 944 ಬಾಲರಾಜ್ ಮತ್ತು PC 3046 ರವಿಕುಮಾರ್ ರವರು ಕೇರಳ ರಾಜ್ಯದ ಕೊಲ್ಲಂ ನಗರದ ವಟ್ಟಕುಟ್ಟು ಪ್ರದೇಶದ ಲಲಿತ ಮಂದಿರಂ ಎಂಬ ಮನೆಯಲ್ಲಿ ಆರೋಪಿಯನ್ನು ಬಂಧಿಸಿದರು.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!