Sunday, July 26, 2026
spot_imgspot_img
spot_imgspot_img

ನಿಟ್ಟೆ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ‘ಗ್ರಂಥಾಲಯ ಸಪ್ತಾಹ – 2026’ ಉದ್ಘಾಟನೆ

- Advertisement -
- Advertisement -

ನಿಟ್ಟೆ: ನಿಟ್ಟೆ ತಾಂತ್ರಿಕ ಶಿಕ್ಷಣ ಸಂಸ್ಥೆಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ‘ಗ್ರಂಥಾಲಯ ಸಪ್ತಾಹ – 2026’ ಕಾರ್ಯಕ್ರಮವು ಭಾನುವಾರ ಉದ್ಘಾಟನೆಗೊಂಡಿತು.ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ನಿರಂಜನ್ ಎನ್. ಚಿಪ್ಲೂನ್ಕರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಜ್ಞಾನವರ್ಧನೆಗೆ ಗ್ರಂಥಾಲಯಗಳ ಪಾತ್ರ ಅಪಾರವಾಗಿದೆ ಎಂದು ತಿಳಿಸಿ, ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿರುವ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಿ ಶುಭ ಹಾರೈಸಿದರು.

ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ನಾಗೇಶ್ ಪ್ರಭು ದೀಪ ಪ್ರಜ್ವಲಿಸುವ ಮೂಲಕ ಪುಸ್ತಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಂಥಾಲಯದ ಸಂಪನ್ಮೂಲಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಕಾರ್ಯಕ್ರಮದಲ್ಲಿ ಗ್ರಂಥಾಲಯ ಸಿಬ್ಬಂದಿಗಳು, ಶಿಕ್ಷಕ–ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗ್ರಂಥಪಾಲಕ ಡಾ. ಪ್ರೀತಂ ಶೆಟ್ಟಿ ಕೆ. ವಿ. ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಸಹಾಯಕ ಗ್ರಂಥಪಾಲಕ ಸುಧಾಕರ್ ಕೆ. ವಂದಿಸಿದರು. ಕಾರ್ಯಕ್ರಮವನ್ನು ಇನ್ನೋರ್ವ ಸಹಾಯಕ ಗ್ರಂಥಪಾಲಕ ಸತೀಶ್ ಶೆಟ್ಟಿ ನಿರ್ವಹಿಸಿದರು. ಗ್ರಂಥಾಲಯ ಸಿಬ್ಬಂದಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

- Advertisement -

Related news

error: Content is protected !!