Sunday, July 19, 2026
spot_imgspot_img
spot_imgspot_img

ಉಡುಪಿ : ಮಾಜಿ ಶಾಸಕ, ಹಿರಿಯ ರಾಜಕಾರಣಿ ಬಸ್ರೂರು ಅಣ್ಣಪ್ಪ ಹೆಗ್ಡೆ ನಿಧನ

- Advertisement -
- Advertisement -

ಉಡುಪಿ: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ(91) ಅವರು ವಯೋಸಹಜ ಕಾಯಿಲೆಯಿಂದ ಇಂದು (ಫೆ.07) ಕೊನೆಯುಸಿರೆಳೆದಿದ್ದಾರೆ. ಇವರು ಧಾರ್ಮಿಕ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದರು.

ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು 1983 ರಿಂದ 1985ರ ವರೆಗೆ ಜನತಾ ಪಕ್ಷದಿಂದ ಬೈಂದೂರು ಕ್ಷೇತ್ರದ ಶಾಸಕರಾಗಿ ಕಾರ್ಯನಿರ್ವಹಿಸಿ, ತಮ್ಮ ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದ್ದ ಅವರು, ಪ್ರಾಮಾಣಿಕತೆ ಮತ್ತು ಸರಳತೆಯಿಂದ ಜನಮನ್ನಣೆ ಗಳಿಸಿದ್ದರು.

ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರಲ್ಲದೇ ಅವರು, ಧಾರ್ಮಿಕ ಕ್ಷೇತ್ರದಲ್ಲಿಯೂ ಪ್ರಮುಖ ಪಾತ್ರವಹಿಸಿದ್ದರು. ಸ್ಥಳೀಯ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

1960ರಿಂದ 1983ರವರೆಗೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ಆಡಳಿತದಲ್ಲಿ ಅಪಾರ ಅನುಭವ ಹೊಂದಿದ್ದರು. ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅವರ ಸೇವೆ ಗಣನೀಯವಾಗಿದ್ದು, ಹಲವಾರು ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

- Advertisement -

Related news

error: Content is protected !!