Tuesday, July 21, 2026
spot_imgspot_img
spot_imgspot_img

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ 3 ಕೋಟಿ. ರೂ. ಮೌಲ್ಯದ ಗಾಂಜಾ ಪತ್ತೆ; ಮೂವರು ಬಂಧನ

- Advertisement -
- Advertisement -

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಮಲೇಶಿಯಾದಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಳಿ ಒಂದು ಕೋಟಿ 91 ಲಕ್ಷ ರೂ. ಮೌಲ್ಯದ 5.48 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಪುಕೇಟ್ ನಿಂದ ಬಂದ ಇಬ್ಬರು ಪ್ರಯಾಣಿಕರನ್ನು ಪರಿಶೀಲನೆಗೆ ಒಳಪಡಿಸಿದಾಗ ಒಂದು ಕೋಟಿ ಆರು ಲಕ್ಷ ರೂ. ಮೌಲ್ಯದ 3.03 ಕೆಜಿ ಹೈಡ್ರೋಫೋನಿಕ್ ಗಾಂಜಾ ಪತ್ತೆಯಾಗಿದೆ. ಒಟ್ಟು 8.5 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಮೌಲ್ಯವನ್ನು ಸುಮಾರು 2.97 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಗಾಂಜಾ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!