- Advertisement -
- Advertisement -



ಶಿಲ್ಲಾಂಗ್: ಮೇಘಾಲಯದ ಪೂರ್ವ ಜಯಂತಿಯಾ ಹಿಲ್ಸ್ ಜಿಲ್ಲೆಯ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಮತ್ತೆ ಎರಡು ಮೃತದೇಹಗಳು ಪತ್ತೆಯಾಗಿವೆ. ಇದರೊಂದಿಗೆ ಈ ಗಣಿಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ತಲುಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ ಉಮೃನಗಟ್ ಗ್ರಾಮದ ತಂಗ್‌ಸ್ಕು ಪ್ರದೇಶದಲ್ಲಿ ವಿವಿಧ ಸಂಸ್ಥೆಗಳ ಶೋಧ ಕಾರ್ಯಾಚರಣೆ ಸಂದರ್ಭಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಅವರು ಹೇಳಿದ್ದಾರೆ.
ಈ ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.
ಮೃತಪಟ್ಟವರ ಗುರುತು ಪರಿಶೀಲಿಸುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠ ವಿಕಾಸ್ ಕುಮಾರ್ ಹೇಳಿದ್ದಾರೆ.
- Advertisement -








