Wednesday, September 30, 2026
spot_imgspot_img
spot_imgspot_img

ರಷ್ಯಾದ ಕಾಲೇಜಿನಲ್ಲಿ ಚೂರಿ ಇರಿತ: ನಾಲ್ವರು ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಗಾಯ

- Advertisement -
- Advertisement -

ಹೊಸದಿಲ್ಲಿ: ರಷ್ಯಾದ ಉಫಾ ನಗರದಲ್ಲಿ ನಡೆದ ಚೂರಿ ಇರಿತ ಘಟನೆಯಲ್ಲಿ ನಾಲ್ವರು ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ ಎಂದು ಮಾಸ್ಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ರಷ್ಯಾದ ಬಷ್ಕಕೋರ್ಟೊಸ್ತಾನ್ ಗಣರಾಜ್ಯದ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿರುವ ಕ್ರೀಡಾ ಹಾಲ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಚೂರಿ ಇರಿತದ ದಾಳಿ ನಡೆದಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈ ಹಿನ್ನೆಲೆಯಲ್ಲಿ ಭಾರತೀಯ ರಾಯಭಾರ ಕಚೇರಿ ಎಕ್ಸ್ (X) ಪೋಸ್ಟ್ ಮೂಲಕ ಮಾಹಿತಿ ನೀಡಿದೆ.

ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳೂ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಉಫಾದಲ್ಲಿ ದುರದೃಷ್ಟಕರ ದಾಳಿಯೊಂದು ನಡೆದಿದೆ. ನಾಲ್ವರು ಭಾರತೀಯರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

” ಭಾರತೀಯ ರಾಯಭಾರ ಕಚೇರಿ ಸ್ಥಳೀಯ ಅಧಿಕಾರಿಗಳು ಹಾಗೂ ಕಝಾನ್‌ನಲ್ಲಿರುವ ದೂತಾವಾಸದೊಂದಿಗೆ ಸತತ ಸಂಪರ್ಕದಲ್ಲಿದ್ದು, ಗಾಯಾಳು ವಿದ್ಯಾರ್ಥಿಗಳಿಗೆ ಅಗತ್ಯ ನೆರವು ಒದಗಿಸಲು ಕ್ರಮ ಕೈಗೊಂಡಿದೆ” ಎಂದು ಮಾಸ್ಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸ್ಪಷ್ಟಪಡಿಸಿದೆ.

- Advertisement -

Related news

error: Content is protected !!