Wednesday, September 30, 2026
spot_imgspot_img
spot_imgspot_img

ಫೆ.12ರಂದು ಅಖಿಲ ಭಾರತ ಮುಷ್ಕರ:ಉದ್ಯೋಗ ಖಾತ್ರಿ ಯೋಜನೆ ಸಂಬಂಧಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಸ್ವಯಂ ಪ್ರೇರಿತ ಬಂದ್‌

- Advertisement -
- Advertisement -

ಕನಕಗಿರಿ: ಉದ್ಯೋಗ ಖಾತ್ರಿ ಯೋಜನೆ ಸಂಬಂಧಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಹಾಗೂ ಸ್ವತಂತ್ರ ವಲಯಗಳ ನೌಕರರ ಒಕ್ಕೂಟಗಳು ಫೆ.12ರಂದು ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಹಾಗೂ ಕಾರ್ಯದರ್ಶಿ ನಿರುಪಾದಿ ಬೆಣಕಲ್ ತಿಳಿಸಿದ್ದಾರೆ.

ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಮುಷ್ಕರ ಸಂಬಂಧ ಪೋಸ್ಟರ್ ಹಾಗೂ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಬಲಪಡಿಸಿ ದಿನಗೂಲಿ ಕಾರ್ಮಿಕರಿಗೆ ದಿನಕ್ಕೆ 600 ರೂ. ನಿಗದಿ ಮಾಡಬೇಕು ಹಾಗೂ ವರ್ಷಕ್ಕೆ 200 ಮಾನವ ದಿನಗಳ ಕೆಲಸ ಒದಗಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ವಿಮಾ ಕಾಯ್ದೆ ರದ್ದುಪಡಿಸುವುದು ಹಾಗೂ ದುಡಿಯುವ ವರ್ಗಕ್ಕೆ ವಿರುದ್ಧವಾಗಿದೆ ಎನ್ನಲಾಗುತ್ತಿರುವ ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳ (ಲೇಬರ್ ಕೋಡ್) ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು. ದೇಶದ ಸಂಪತ್ತಿನ ಸಂರಕ್ಷಣೆ, ದುಡಿಯುವ ಜನರ ಹಕ್ಕುಗಳ ರಕ್ಷಣೆ ಮತ್ತು ಮಾನವ ವಿರೋಧಿ ನೀತಿಗಳ ವಿರುದ್ಧ ಈ ಸಾರ್ವತ್ರಿಕ ಮುಷ್ಕರ ನಡೆಯಲಿದೆ ಎಂದು ತಿಳಿಸಿದರು.

ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಷ್ಕರವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಿಐಟಿಯು ತಾಲೂಕಿನ ಮುಖಂಡರಾದ ಮಲ್ಲಪ್ಪ ಮ್ಯಾಗಡೆ, ನಿಂಗಪ್ಪ, ಶಿವು, ಲಕ್ಷ್ಮೀ ಸೋನಾರೆ, ಅಮರಮ್ಮ ಮೌಲಾಹುಸೇನ ಸುಳೆಕಲ್, ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಉಪಾಧ್ಯಕ್ಷ ಬಾಳಪ್ಪ ಹುಲಿಹೈದರ, ಪರಶುರಾಮ, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಶಿವಕುಮಾರ, ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!