Monday, July 20, 2026
spot_imgspot_img
spot_imgspot_img

ಅನಾರೋಗ್ಯದ ಹಿನ್ನೆಲೆ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆಸ್ಪತ್ರೆಗೆ ದಾಖಲು

- Advertisement -
- Advertisement -

ಪುಣೆ: ಅನಾರೋಗ್ಯದ ಹಿನ್ನೆಲೆ ಹಿರಿಯ ರಾಜಕಾರಣಿ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಪುಣೆಯ ರೂಬಿ ಹಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಟಲು ಸಂಬಂಧಿತ ಸಮಸ್ಯೆಗಳು, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿರುವ ಶರದ್ ಪವಾರ್ ಅವರು ಮಹಾರಾಷ್ಟ್ರದ ಬಾರಾಮತಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದರು. ಆದರೂ ಆರೋಗ್ಯದಲ್ಲಿ ಚೇತರಿಕೆ ಕಂಡು ಬರದ ಹಿನ್ನೆಲೆ ಪುಣೆಯ ರೂಬಿ ಹಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಶರದ್ ಪವಾರ್ ಅವರು ಗಂಟಲು ಸೋಂಕಿನಿಂದ ಬಳಲುತ್ತಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರ ಆಪ್ತ ಸಹಾಯಕರೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

- Advertisement -

Related news

error: Content is protected !!