- Advertisement -
- Advertisement -



ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣದಲ್ಲಿ ಹೊಸ ಬೆಳವಣಿಗೆ ಕಂಡುಬಂದಿದೆ. ಪ್ರಕರಣದ ತನಿಖೆ ವೇಳೆ ಅಪಹರಣ ಯತ್ನ ನಡೆದಿದೆ ಎಂಬ ಆರೋಪ ಸುಳ್ಳೆಂದು ಪತ್ತೆಯಾಗಿದೆ.
ಮಂಗಳೂರಿನ ಕಾಲೇಜಿನಲ್ಲಿ ಪ್ರವೇಶ ಪಡೆಯುವ ಉದ್ದೇಶದಿಂದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೇ ಅಪಹರಣದ ಕಥೆ ರೂಪಿಸಿದ್ದಾಳೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಅಪರಿಚಿತರು ಅಪಹರಿಸಲು ಯತ್ನಿಸಿದ್ದಾರೆ ಎಂದು ವಿದ್ಯಾರ್ಥಿನಿ ದೂರಿದ್ದಳು. ಕೈಗೆ ಗಾಯವಾಗಿದೆ ಎಂದು ಹೇಳಿ ಆಸ್ಪತ್ರೆಗೆ ದಾಖಲಾಗಿದ್ದಳು.
ಆದರೆ ಸಿಸಿಟಿವಿ ಪರಿಶೀಲನೆ, ಸ್ಥಳ ಪರಿಶೀಲನೆ ಹಾಗೂ ವಿಚಾರಣೆ ವೇಳೆ ಯಾವುದೇ ಅಪಹರಣ ಯತ್ನ ನಡೆದಿಲ್ಲ ಎಂಬುದು ಸ್ಪಷ್ಟವಾಗಿದೆ. ಬಳಿಕ ವಿಚಾರಣೆ ವೇಳೆ ವಿದ್ಯಾರ್ಥಿನಿಯೇ ಪೊಲೀಸರ ಮುಂದೆ ಸತ್ಯ ಒಪ್ಪಿಕೊಂಡಿದ್ದಾಳೆ. ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
- Advertisement -








