Sunday, July 19, 2026
spot_imgspot_img
spot_imgspot_img

ವಿಟ್ಲ ಐಟಿಐನಲ್ಲಿ ವಿದ್ಯಾರ್ಥಿಗಳ ನಡುವೆ ಚೂರಿ ಇರಿತ — ಗಾಯಾಳು ಆಸ್ಪತ್ರೆಗೆ ದಾಖಲು

- Advertisement -
- Advertisement -

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜೊಂದರಲ್ಲಿ ಸಹಪಾಠಿಗಳ ನಡುವಿನ ಜಗಳ ಚಾಕು ಇರಿತಕ್ಕೆ ತಿರುಗಿದ ಘಟನೆ ನಡೆದಿದೆ. ಹೇಮಂತ್ (19) ಮತ್ತು ಅಪ್ರಾಪ್ತ ವಿದ್ಯಾರ್ಥಿ ಇಬ್ಬರೂ ಗೆಳೆಯರಾಗಿದ್ದು, ಅವರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಉಂಟಾಗಿದೆ.

ಈ ವೇಳೆ ಹೇಮಂತ್ ತನ್ನ ಬಳಿಯಿದ್ದ ಪೆನ್ ಚಾಕುವಿನಿಂದ ಅಪ್ರಾಪ್ತ ವಿದ್ಯಾರ್ಥಿಯ ಬೆನ್ನಿನ ಭಾಗಕ್ಕೆ ಇರಿದಿದ್ದಾನೆ ಎಂದು ತಿಳಿದುಬಂದಿದೆ.
ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ.

ಜಗಳವನ್ನು ತಡೆಯಲು ಮುಂದಾದ ಮತ್ತೊಬ್ಬ ಅಪ್ರಾಪ್ತ ವಿದ್ಯಾರ್ಥಿಗೂ ಸ್ವಲ್ಪ ಪ್ರಮಾಣದ ಗಾಯಗಳಾಗಿವೆ. ಘಟನೆ ಸಂಬಂಧ ಹೇಮಂತ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 32/2026ರಂತೆ (BNS) ಕಲಂ 115(1), 352, 109, 118(1) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೋಲಿಸರು ತಿಳಿಸಿದ್ದಾರೆ.

- Advertisement -

Related news

error: Content is protected !!