Thursday, July 23, 2026
spot_imgspot_img
spot_imgspot_img

ತೆಕ್ಕಾರು: ಕನರಾಜೆಯಲ್ಲಿ ಪಿಕಾಪ್ ಪಲ್ಟಿ: ಚಾಲಕ ಮೃತ್ಯು, ಇನ್ನೋರ್ವನಿಗೆ ಗಾಯ

- Advertisement -
- Advertisement -

ಉಪ್ಪಿನಂಗಡಿ: ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಫೆ.11ರಂದು ನಡೆದಿದೆ.


ಪಿಕಪ್ ವಾಹನದಲ್ಲಿ ಸೆಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆಯಿಂದ ವಾಹನ ಕೆಳಭಾಗದ ರಸ್ತೆಗೆ ಪಲ್ಟಿಯಾಗಿ ವಾಹನದಲ್ಲಿದ್ದ ಅಳಕ್ಕೆ ನಿವಾಸಿ ಹರಿಶ್ಚಂದ್ರ ಎಂಬವರ ಮಗ ಹೇಮಚಂದ್ರ (32ವ) ಎಂಬವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಹಾಗೂ ಪಿಕಪ್‌ನಲ್ಲಿದ್ದ ಉಮ್ಮರಬ್ಬ (51) ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಅವಿವಾಹಿತನಾಗಿದ್ದ ಮೃತ ಹೇಮಚಂದ್ರ, ತಂದೆ ತಾಯಿಗೆ ಇವರೊಬ್ಬರೇ ಮಗನಾಗಿದ್ದು ,ಮನೆಗೆ ಆಧಾರ ಸ್ತಂಭವಾಗಿದ್ದರು. ಘಟನೆಯ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!