- Advertisement -
- Advertisement -



ಬೆಂಗಳೂರು: ಹಣಕಾಸಿನ ವಿಚಾರಕ್ಕಾಗಿ ತಂದೆ, ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಂದೆ ನವೀನ್ ಚಂದ್ರ ಭಟ್, ತಾಯಿ ಶಾಮಲಾ ಭಟ್ ಕೊಲೆಯಾದ ಪೋಷಕರು. ಆರೋಪಿಯನ್ನು ರೋಹನ್ ಭಟ್ ಎಂದು ಗುರುತಿಸಲಾಗಿದ್ದು, ಟೆಕ್ಕಿಯಾಗಿದ್ದ ಎಂದು ತಿಳಿದುಬಂದಿದೆ.
ಚಾಕುವಿನಿಂದ ಚುಚ್ಚಿ ತಂದೆ ಹಾಗೂ ತಾಯಿಯನ್ನು ಕೊಲೆ ಮಾಡಿದ್ದು, ಹಣಕಾಸಿನ ವಿಚಾರವಾಗಿ ಹತ್ಯೆಯಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ಹೆಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








