Wednesday, July 22, 2026
spot_imgspot_img
spot_imgspot_img

ಶಾಲಾ ಮಕ್ಕಳನ್ನು ಟಿಪ್ಪರ್ ಮತ್ತು ಪಿಕ್‌ಅಪ್ ವಾಹನದಲ್ಲಿ ಸಾಗಣೆ: ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಪರಾರಿ ಎಂಬಲ್ಲಿ ಬಳಂಜ–ನಾಲ್ಕೂರು ಸಾರ್ವಜನಿಕ ರಸ್ತೆಯಲ್ಲಿ ಶಾಲಾ ಮಕ್ಕಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣ ಫೆ.9ರಂದು ಬೆಳಕಿಗೆ ಬಂದಿದೆ. ಬಳಂಜ ಕಡೆಯಿಂದ ಟಿಪ್ಪರ್ ಲಾರಿ (ನಂ. KA70 2596) ಹಾಗೂ ಪಿಕ್‌ಅಪ್ ವಾಹನ (ನಂ. KA21A 8776)ಗಳಲ್ಲಿ ಮಕ್ಕಳನ್ನು ತುಂಬಿಸಿಕೊಂಡು ನಾಲ್ಕೂರು ಪ್ರದೇಶದ ನರ್ಸರಿಗೆ ಅಧ್ಯಯನಕ್ಕೆ ಕರೆದುಕೊಂಡು ಹೋಗಲಾಗುತ್ತಿತ್ತು ಎನ್ನಲಾಗಿದೆ.

ಈ ಸಂಬಂಧ ಬಳಂಜ ಗ್ರಾಮದ ನಿವಾಸಿ ಧರಣೇಂದ್ರ ಅವರು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 14/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ ಕಲಂ 281 ಹಾಗೂ ಮೋಟಾರು ವಾಹನ ಕಾಯ್ದೆಯ ಕಲಂ 66 ಮತ್ತು 192(ಎ) ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!