- Advertisement -
- Advertisement -



ಚಿತ್ರದುರ್ಗ: ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಭರಮಸಾಗರದ ಖಾಸಗಿ ಶಾಲೆಯಲ್ಲಿ ನಡೆದಿದೆ.
ಇಲ್ಲಿನ ವಸತಿ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೊಟ್ರೇಶ್(16) ಆತ್ಮಹತ್ಯೆ ಮಾಡಿಕೊಂಡವನು. ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದವನಾಗಿದ್ದು, ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ
ಕೊಟ್ರೇಶ್ 3ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆ ಸಂಬಂಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








