- Advertisement -
- Advertisement -



ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಹೆಸರಿನಲ್ಲಿ ನಕಲಿ ಫಲವಿ ಖಾತೆ ತೆರೆದಿದ್ದ ದುಷ್ಕರ್ಮಿಗಳ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪೊಲೀಸ್ ಆಯುಕ್ತರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಗಣ್ಯರ ಜೊತೆಗಿರುವ ಪೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಪೊಲೀಸ್ ಆಯುಕ್ತರದ್ದೇ ಅಸಲಿ ಖಾತೆಯೆಂದು ಸಾಕಷ್ಟು ಜನ ಸಂದೇಶ ಕಳುಹಿಸಿದ್ದಾರೆ. ಬಳಿಕ ವಂಚನೆಯ ಮೂಲಕ ಹಣ ಪಡೆದಿರುವ ಬಗ್ಗೆ ದೂರುಗಳು ಕೇಳಿಬಂದಿದ್ದವು.
ಈ ಸಂಬಂಧ ಸೈಬರ್ ಕ್ರೈಂ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಶ್ರೀಶೈಲ್ ಬಾಗಲೂರ ಭೀಮರಾಯ್ ನೀಡಿರುವ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿದೆ.
- Advertisement -








