- Advertisement -
- Advertisement -



ಬೆಂಗಳೂರು: ಯುವಕನೋರ್ವ ತನ್ನ ಹುಟ್ಟುಹಬ್ಬದ ದಿನದಂದೇ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಐವರಕಂಡಪುರ ಸಮೀಪ ನಡೆದಿದೆ. ಪವನ್(24) ಮೃತ ಯುವಕ.
ಸ್ನೇಹಿತರೊಂದಿಗೆ ಹುಟ್ಟುಹಬ್ಬದ ಆಚರಣೆ ಮುಗಿಸಿ ಕೇಕ್ ಕಟ್ ಮಾಡಿ ಮನೆಗೆ ತೆರಳುತ್ತಿದ್ದಾಗ, ಪವನ್ ಚಲಾಯಿಸುತ್ತಿದ್ದ ಬೈಕ್ ಮತ್ತು ಎದುರಿನಿಂದ ಬರುತ್ತಿದ್ದ ಗೂಡ್ಸ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಗೂಡ್ಸ್ ವಾಹನ ಮತ್ತು ಬೈಕ್ ಅತಿ ವೇಗದಲ್ಲಿದ್ದ ಕಾರಣ ಡಿಕ್ಕಿಯ ತೀವ್ರತೆ ಹೆಚ್ಚಾಗಿದ್ದು, ಪವನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಸೋಲದೇವನಹಳ್ಳಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








