Sunday, July 19, 2026
spot_imgspot_img
spot_imgspot_img

ಅಹ್ಮದಾಬಾದ್-ಗೋರಖ್‌ಪುರ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಟಿಟಿಇಯಿಂದ ಅತ್ಯಾಚಾರಕ್ಕೆ ಯತ್ನ; ಯುವತಿ ಆರೋಪ

- Advertisement -
- Advertisement -

ಲಕ್ನೋ: ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿಯೊಬ್ಬಳು ಅಹ್ಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಟಿಟಿಇ ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಿ ದೂರು ನೀಡಿದ್ದಾರೆ.ಇಂದ್ರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ ರವಿವಾರ ರಾತ್ರಿ ಈ ಘಟನೆ ನಡೆದಿದೆ. ಆರೋಪಿಯನ್ನು ರಾಹುಲ್ ಕುಮಾರ್ ಎಂದು ಗುರುತಿಸಲಾಗಿದೆ, ಸಂತ್ರಸ್ತೆ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಆತ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.ಸಂತ್ರಸ್ತೆ ಉತ್ತರ ಪ್ರದೇಶದ ಮೌ ಜಿಲ್ಲೆಯ ನಿವಾಸಿಯಾಗಿದ್ದು, ಪ್ರಸ್ತುತ ಗೋರಖ್‌ಪುರದಲ್ಲಿ ವಾಸಿಸುತ್ತಿದ್ದಾರೆ.

ಅವರು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದರು. ಎನ್‌ಸಿಸಿ ಪರೀಕ್ಷೆಗೆ ಹಾಜರಾಗಿ ಗೋರಕ್‌ಪುರಕ್ಕೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.“ರೈಲು ನಿಲ್ದಾಣದಲ್ಲಿ ಭಾರೀ ಜನಸಂದಣಿಯಿದ್ದ ಕಾರಣ ನನಗೆ ಟಿಕೆಟ್ ಖರೀದಿಸಲು ಸಾಧ್ಯವಾಗಲಿಲ್ಲ. ಟಿಕೆಟ್ ಪರಿಶೀಲನೆಯ ಸಮಯದಲ್ಲಿ, ಟಿಟಿಇ ಈ ಬಗ್ಗೆ ಪ್ರಶ್ನಿಸಿದ್ದಾರೆ. ಬಳಿಕ ದಂಡವನ್ನು ಪಡೆದು ಸೀಟ್ ವ್ಯವಸ್ಥೆ ಮಾಡಿಕೊಡುವುದಾಗಿ ಎಸಿ ಫಸ್ಟ್ ಕ್ಲಾಸ್ ಕೋಚ್‌ನ ಕ್ಯಾಬಿನ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಘಟನೆ ಬಗ್ಗೆ ಬಹಿರಂಗಪಡಿಸಿದರೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ” ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

- Advertisement -

Related news

error: Content is protected !!