


ವಿಟ್ಲ: ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜಾತಿ ನಿಂದನೆ ನಡೆಸಿ, ಹಲ್ಲೆ ಮಾಡಿ ಕೊಲೆ ಯತ್ನ ಮಾಡಿದ ಪ್ರಕರಣದಲ್ಲಿ ಆರೋಪಿ ವಿರುದ್ಧ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ದಿನಾಂಕ 06.05.2019ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ: 79/2019ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ SC/ST (ಅತ್ಯಾಚಾರ ತಡೆ) ಕಾಯ್ದೆಯ ಕಲಂ 3(1)(r)(s), 3(2)(v), 3(2)(va) ಹಾಗೂ ಭಾರತೀಯ ದಂಡ ಸಂಹಿತೆಯ (IPC) ಕಲಂ 447, 504, 324, 307 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಆಗಿನ ತನಿಖಾಧಿಕಾರಿಗಳಾದ ಸೈದುಲ್ ಅಡಾವತ್ (ಎಎಸ್ಪಿ, ಬಂಟ್ವಾಳ ಉಪ ವಿಭಾಗ) ಅವರು ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದು, ದಿನಾಂಕ 30/01/2026ರಂದು ಆರೋಪಿ ನಾರಾಯಣ ಗೌಡ ಅವರನ್ನು IPC ಕಲಂ 447, 324 ಮತ್ತು 504 ಅಡಿಯಲ್ಲಿ ದೋಷಿ ಎಂದು ಘೋಷಿಸಲಾಗಿದೆ.
ನ್ಯಾಯಾಲಯವು ಕ್ರಮವಾಗಿ ರೂ. 500, ರೂ. 10,000 ಹಾಗೂ ರೂ. 10,000 ದಂಡ ವಿಧಿಸಿದ್ದು, ದಂಡ ಪಾವತಿಸಲು ವಿಫಲವಾದಲ್ಲಿ 3 ತಿಂಗಳು, 6 ತಿಂಗಳು ಮತ್ತು 6 ತಿಂಗಳುಗಳ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಿದೆ.ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಜ್ಯೋತಿ ನಾಯ್ಕ ಸರ್ಕಾರದ ಪರ ವಾದ ಮಂಡಿಸಿದರು.








