


ಭುವನೇಶ್ವರ: ಒಡಿಶಾದ ಕೇಂದ್ರಪಾರ ಜಿಲ್ಲೆಯ ಖಾಸಗಿಶಾಲೆಯೊಂದರಲ್ಲಿ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾವೆಸಗಿದ ಆರೋಪದ ಮೇಲೆ ಐವರು ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಸಂತ್ರಸ್ತ ಬಾಲಕಿಯ ತಂದೆ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ರಾಜ್ ಕನಿಕಾ ಪೊಲೀಸ್ ಠಾಣೆಗೆ ಸಲ್ಲಿಸಿದ ಪ್ರತ್ಯೇಕ ದೂರುಗಳನ್ನು ಆಧರಿಸಿ ಈ ಐವರು ಶಾಲಾ ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.ಶಿಕ್ಷಕರು ತನ್ನ ಮೇಲೆ ದೀರ್ಘಕಾಲದಿಂದ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆ ಎಂದು ತಮ್ಮ ಪುತ್ರಿಯು ಆರೋಪಿಸಿದ ಬಳಿಕ, ಆಕೆಯ ಪೋಷಕರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮೊರೆ ಹೋಗಿದ್ದರು ಎಂದು ಅವರು ತಿಳಿಸಿದ್ದಾರೆ.ಈ ಆರೋಪವನ್ನು ಆರಂಭದಲ್ಲಿ ತನಿಖೆ ನಡೆಸಿದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು, ಈ ವಿಷಯವನ್ನು ರಾಜ್ ಕನಿಕಾ ಪೊಲೀಸ್ ಠಾಣೆಯ ಗಮನಕ್ಕೆ ತಂದಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಫೆಬ್ರವರಿ 18ರಂದು ದೂರು ದಾಖಲಿಸಿಕೊಳ್ಳಲಾಗಿದೆ. 48 ಗಂಟೆಗಳ ಕಾಲ ತನಿಖೆ ನಡೆಸಿದ ಬಳಿಕ, ಈ ಕುರಿತು ಕಾನೂನು ಕ್ರಮ ಜರುಗಿಸಲು ನಾವು ಪೊಲೀಸರಿಗೆ ಶಿಫಾರಸು ಮಾಡಿದೆವು” ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯೆ ಸ್ವಾಗತಿಕಾ ಪಾತ್ರಾ ಹೇಳಿದ್ದಾರೆ.ಈ ಆರೋಪಗಳ ಕುರಿತು ಪ್ರತ್ಯೇಕ ತನಿಖೆ ನಡೆಸುವಂತೆ ಜಿಲ್ಲಾ ಶಿಕ್ಷಣಾಧಿಕಾರಿಗೆ ಸಮಿತಿಯು ಸೂಚಿಸಿದೆ ಎಂದೂ ಅವರು ತಿಳಿಸಿದ್ದಾರೆ.”ಎರಡು ದೂರುಗಳನ್ನು ಆಧರಿಸಿ, ಕಾನೂನು ನಿಯಮಗಳ ಪ್ರಕಾರ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.
ಆರೋಪಿಗಳು ಹಾಗೂ ಸಂತ್ರಸ್ತ ಬಾಲಕಿಯು ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ. ಪ್ರಾಥಮಿಕ ತನಿಖೆಯನ್ನು ಆಧರಿಸಿ ಶಿಕ್ಷಕರನ್ನು ಬಂಧಿಸಲಾಗಿದೆ. ಮುಂದಿನ ತನಿಖೆ ಪ್ರಗತಿಯಲ್ಲಿದೆ” ಎಂದು ರಾಜ್ ಕನಿಕಾ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್ ಪೆಕ್ಟರ್ ಸಂಜಯ್ ಮಲಿಕ್ ಹೇಳಿದ್ದಾರೆ.“ಎರಡು ದೂರುಗಳನ್ನು ಆಧರಿಸಿ, ಕಾನೂನು ನಿಯಮಗಳ ಪ್ರಕಾರ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ಹಾಗೂ ಸಂತ್ರಸ್ತ ಬಾಲಕಿಯು ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ. ಪ್ರಾಥಮಿಕ ತನಿಖೆಯನ್ನು ಆಧರಿಸಿ ಶಿಕ್ಷಕರನ್ನು ಬಂಧಿಸಲಾಗಿದೆ. ಮುಂದಿನ ತನಿಖೆ ಪ್ರಗತಿಯಲ್ಲಿದೆ” ಎಂದು ರಾಜ್ ಕನಿಕಾ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್ ಪೆಕ್ಟರ್ ಸಂಜಯ್ ಮಲಿಕ್ ಹೇಳಿದ್ದಾರೆ.ಈ ಸಂಬಂಧ ಕೇಂದ್ರಪಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಪತ್ರ ಸಲ್ಲಿಸಿರುವ ವಿರೋಧ ಪಕ್ಷವಾದ ಬಿಜೆಡಿ, ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದೆ.








