- Advertisement -
- Advertisement -



ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಚಂಡರಕ್ಕಿ ಗ್ರಾಮದಲ್ಲಿ ಕುರಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.ರಾತ್ರಿ ವೇಳೆ ಕುರಿ ಕಳ್ಳತನ ಮಾಡಲು ಬಂದಿದ್ದ ಶಂಕಿತ ವ್ಯಕ್ತಿ ಗ್ರಾಮಸ್ಥರ ಅನುಮಾನಕ್ಕೆ ಸಿಲುಕಿ ಸಿಕ್ಕಿಬಿದ್ದಿದ್ದಾನೆ.

ತಕ್ಷಣವೇ ಕೆಲವರು ಆತನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಕಟ್ಟಿ ಹೊಡೆದಿರುವುದಾಗಿ ತಿಳಿದುಬಂದಿದೆ.ಮಾಹಿತಿ ತಿಳಿದ ಬಳಿಕ ಗುರುಮಠಕಲ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಶಂಕಿತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕುರಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿತ್ತು. ಈ ಹಿನ್ನೆಲೆ ಗ್ರಾಮಸ್ಥರು ಶಂಕಿತನನ್ನು ಸ್ವತಃ ಹಿಡಿದು ಪೊಲೀಸರಿಗೆ ಒಪ್ಪಿಸಿರುವುದು ಗಮನಾರ್ಹವಾಗಿದೆ.ಈ ಘಟನೆ ಸಂಬಂಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








