- Advertisement -
- Advertisement -



ಬೆಂಗಳೂರು: ಚಿಕ್ಕಪೇಟೆಯ ಕುಂಬಾರಪೇಟೆಯಲ್ಲಿ ಇಂದು ಬೆಳಿಗ್ಗೆ ಸುಮಾರು 9 ಗಂಟೆಗೆ ಮೂರು ಅಂತಸ್ತಿನ ಹಾರ್ಡ್ ವೇರ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ ನಡೆದ ಘಟನೆ ಸಂಭವಿಸಿದೆ.
ಗೋಡೌನ್‌ನಲ್ಲಿದ್ದ ಪ್ಲಾಸ್ಟಿಕ್ ಪೈಪ್‌ಗಳು ಮತ್ತು ಹಾರ್ಡ್ ವೇರ್ ಸಾಮಾಗ್ರಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿರಬಹುದು ಎನ್ನಲಾಗಿದೆ.
ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹಲಸೂರು ಗೇಟ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
- Advertisement -







