Friday, July 31, 2026
spot_imgspot_img
spot_imgspot_img

ಕರ್ನಾಟಕ ಲೋಕೋಪಯೋಗಿ ಇಲಾಖೆ ರಸ್ತೆ ಸಂಚಾರ ಸಮೀಕ್ಷೆ ಆರಂಭ -ದಕ್ಷಿಣಕನ್ನಡ ಜಿಲ್ಲೆಯಲ್ಲಿ 139 ಗಣತಿ ಕೇಂದ್ರಗಳ ಆಯ್ಕೆ

- Advertisement -
- Advertisement -

ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಸಂಚರಿಸುವ ವಾಹನಗಳ ಸಂಚಾರ ಸಮೀಕ್ಷೆ 2026ನೇ ಸಾಲಿನಲ್ಲಿ ನಡೆಯಲಿದೆ. ಈ ರಸ್ತೆ ಸಂಚಾರ ಸಮೀಕ್ಷೆ ಫೆ. 26ರ ಬೆಳಿಗ್ಗೆ 6.00 ಗಂಟೆಯಿಂದ ಫೆ. 28ರ ಬೆಳಿಗ್ಗೆ 6.00 ಗಂಟೆಯವರೆಗೆ ಸತತ ಎರಡು ದಿನಗಳ ಕಾಲ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಒಟ್ಟು 139 ಗಣತಿ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದೆ.

ಈ ವಾಹನ ಸಂಚಾರ ಸಮೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ವಾಹನ ಚಾಲಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!