Wednesday, July 22, 2026
spot_imgspot_img
spot_imgspot_img

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸಾವು

- Advertisement -
- Advertisement -

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಗ್ರಾಮದ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ನಡೆದಿದೆ.

ಮೃತರನ್ನು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನಿವಾಸಿಗಳಾದ ನರಸಿಂಹ ಮೂರ್ತಿ(38), ಗಂಗಾಧರ್(35) ಮತ್ತು ಲೋಹಿತ್(40) ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಮುಗಿಸಿ ಐವರು ಸ್ನೇಹಿತರು ಕಾರಿನಲ್ಲಿ ಕುಣಿಗಲ್‌ಗೆ ಮರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಪ್ರಾಥಮಿಕ ಕಾರಣವೆಂದು ಶಂಕಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾ‌ರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!