


ಮಂಗಳೂರು: ವಿಟ್ಲ ಪೊಲೀಸ್ ಠಾಣಾ ಅಕ್ರ 157/2022 ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಫೆ. 20ರಂದು ತೀರ್ಪು ಪ್ರಕಟಿಸಲಾಗಿದೆ.
ಪ್ರಕರಣದ ಆರೋಪಿ ಉಸ್ಮಾನ್ ವಿರುದ್ಧ IPC ಕಲಂ Scheduled Castes and Scheduled Tribes (Prevention of Atrocities) Act3(1)(r)(s), 3(2)(v), 3(2)(va) ಮತ್ತು Indian Penal Code354,506 ಸಂಬಂಧಿತ ವಿಧಿಗಳಡಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ದೋಷಿ ಎಂದು ಘೋಷಿಸಿದೆ.
IPC ಕಲಂ 354 ಹಾಗೂ SC/ST ಕಾಯ್ದೆಯ ಸಂಬಂಧಿತ ವಿಧಿಗಳಡಿ ಆರೋಪಿಗೆ ಒಂದು ವರ್ಷದ ಸರಳ ಜೈಲು ಶಿಕ್ಷೆ ಹಾಗೂ ರೂ.10,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.ಇದೇ ವೇಳೆ IPC ಕಲಂ 506 ಅಡಿಯಲ್ಲಿ ಆರೋಪಿಗೆ ಆರು ತಿಂಗಳ ಸರಳ ಜೈಲು ಶಿಕ್ಷೆ ಮತ್ತು ರೂ.5,000 ದಂಡ ವಿಧಿಸಲಾಗಿದ್ದು, ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ 15 ದಿನಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಪೋಲಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








