Tuesday, July 21, 2026
spot_imgspot_img
spot_imgspot_img

ಬೆಳ್ತಂಗಡಿ: ಅಕ್ರಮ ಗೋಹತ್ಯೆ-ಪ್ರಕರಣ ದಾಖಲು

- Advertisement -
- Advertisement -

ಆರೋಪಿಯ ಮನೆ ಆವರಣ ಜಪ್ತಿ

ಬೆಳ್ತಂಗಡಿ:ಫೆ. 26 ರಂದು ರಾತ್ರಿ, ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ಮನೆಯೊಂದರ ಆವರಣದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ತಯಾರಿಸುತ್ತಿರುವ ಕುರಿತು ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ, ಉಪ್ಪಿನಂಗಡಿ ಪೊಲೀಸ್ ಠಾಣೆ ಪಿಎಸ್ಐ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು.

ಪೊಲೀಸರು ಸ್ಥಳಕ್ಕೆ ತಲುಪಿದಾಗ, ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿಹೋಗಿದ್ದು ಕಂಡುಬಂದಿದೆ. ಸ್ಥಳ ಪರಿಶೀಲನೆ ವೇಳೆ ಗೋಮಾಂಸವನ್ನು ಪ್ಯಾಕೆಟ್‌ಗಳಲ್ಲಿ ಸಂಗ್ರಹಿಸಲಾಗಿದ್ದು, ಸಮೀಪದಲ್ಲಿದ್ದ ಆಟೋ ರಿಕ್ಷಾದಲ್ಲಿಯೂ ಮಾಂಸದ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಒಟ್ಟು 56 ಕೆಜಿ ಗೋಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.ಇದರ ಜೊತೆಗೆ ತೂಕದ ಯಂತ್ರ, ಆಟೋ ರಿಕ್ಷಾ, ಮೊಬೈಲ್ ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2026ರಡಿ ಪ್ರಕರಣ ದಾಖಲಿಸಲಾಗಿದ್ದು, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಕಲಂ 4 ಮತ್ತು 12 ಹಾಗೂ ಭಾರತೀಯ ನ್ಯಾಯ ಸಂಹಿತೆ 2023 ಕಲಂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡು, ಪ್ರಕರಣದ ಆರೋಪಿ ಹೆಚ್ ಅಬ್ದುಲ್ ರಹಿಮಾನ್ ಅವರ ಜಾನುವಾರು ವಧೆಗೆ ಬಳಸಲಾಗಿದ್ದ ಮನೆ ಆವರಣವನ್ನು ಜಪ್ತಿ ಮಾಡಲಾಗಿದೆ ಎಂದು ಪೋಲಿಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!