Monday, July 20, 2026
spot_imgspot_img
spot_imgspot_img

ರಾಯಚೂರು: ಭೀಕರ ಅಪಘಾತ – ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು!

- Advertisement -
- Advertisement -

ರಾಯಚೂರು: ಬೈಕ್‌ಗೆ ಟ್ರಕ್‌ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ಇಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮೊಹಮ್ಮದ್ ಅಲಿ ಪಾಶಾ (24), ನೂರ ಮೊಹಮದ್ (19), ಫಯಾಜ್( 26) ಮೃತ ದುರ್ದೈವಿಗಳು. ಮೃತರೆಲ್ಲಾ ನಗರದ ಸುಖಾಣಿ ಕಾಲೋನಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಗಂಜ್ ವೃತ್ತದಿಂದ ಬರುತ್ತಿದ್ದ ಟ್ರಕ್ ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಸಾವನ್ನಪ್ಪಿದ್ದಾರೆ.

ಪ್ರಕರಣ ಸಂಬಂಧ ರಾಯಚೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿಎಫ್‌ಐಆರ್‌ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನ ರಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!