Saturday, August 1, 2026
spot_imgspot_img
spot_imgspot_img

ಚಿಕ್ಕೋಡಿ: ದ್ವಿತೀಯ ಪಿಯುಸಿ ಪರೀಕ್ಷೆಗೆ ಹೊರಟ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

- Advertisement -
- Advertisement -

ಚಿಕ್ಕೋಡಿ:  ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಶುರುವಾಗುತ್ತಿದ್ದು, ಭವಿಷ್ಯದ ನೂರಾರು ಕನಸು ಕಟ್ಟಿಕೊಂಡು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಂಬಲವಾಡ ಗ್ರಾಮದಲ್ಲಿ ನಡೆದಿದೆ. ಭೂಮಿಕಾ ಮಾಳಂಗಿ (17) ಮೃತ ದುರ್ದೈವಿ.

ಇಂದು ಉತ್ಸಾಹದಿಂದಲೇ ಪರೀಕ್ಷೆಗೆ ಹೊರಡಲು ತಯಾರಾಗಿದ್ದರು. ಆದ್ರೆ ವಿಧಿಯ ಆಟ ಬೇರೆಯೇ ಆಗಿತ್ತು. ಸ್ನಾನ ಮುಗಿಸಿ ಮನೆಯಿಂದ ಹೊರಬರುತ್ತಿದ್ದಾಗಲೇ ಹಠಾತ್ತನೇ ಹೃದಯಾಘಾತ ಸಂಭವಿಸಿದೆ. ಕೂಡಲೇ ಪೋಷಕರು ಆಕೆಯನ್ನ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು, ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.

ದುರ್ಘಟನೆಯಿಂದ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

- Advertisement -

Related news

error: Content is protected !!