Saturday, August 8, 2026
spot_imgspot_img
spot_imgspot_img

ಕನ್ಯಾನ ಸರ್ಕಾರಿ ಕಾಲೇಜಿನಲ್ಲಿ ಸ್ವಚ್ಛತಾ ಕಾರ್ಯಕ್ರಮ

- Advertisement -
- Advertisement -

ಕನ್ಯಾನ: ಫೆ.28ರಂದು ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಹಾಗೂ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಕನ್ಯಾನ ಸರ್ಕಾರಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಕಾಲೇಜು ಆವರಣದಲ್ಲಿ ಸ್ವಚ್ಛತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಉಪನ್ಯಾಸಕರ ಮಾರ್ಗದರ್ಶನದಲ್ಲಿ ಸ್ವಯಂಸೇವಕರು ಕಾಲೇಜಿನ ಆವರಣ, ತರಗತಿ ಕೊಠಡಿಗಳ ಸುತ್ತಮುತ್ತ ಹಾಗೂ ಪ್ರವೇಶ ದ್ವಾರದ ಭಾಗಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು.ಒಣಕಸ ಮತ್ತು ಹಸಿಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ, ಸರಿಯಾದ ವಿಲೇವಾರಿಯ ವ್ಯವಸ್ಥೆಯನ್ನೂ ಮಾಡಲಾಯಿತು.

ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು, ಪ್ಲಾಸ್ಟಿಕ್ ತ್ಯಾಜ್ಯವನ್ನು ತೆರವುಗೊಳಿಸಿದರು ಹಾಗೂ ಗಿಡಮರಗಳ ಸುತ್ತಮುತ್ತ ಸ್ವಚ್ಛತೆ ನಡೆಸಿದರು. ತಮ್ಮ ಸಕ್ರಿಯ ಭಾಗವಹಿಸುವಿಕೆಯ ಮೂಲಕ ಕಾಲೇಜು ಆವರಣವನ್ನು ಸ್ವಚ್ಛ ಹಾಗೂ ಸುಂದರವಾಗಿಸಿದ ವಿದ್ಯಾರ್ಥಿಗಳ ಸೇವಾ ಮನೋಭಾವವನ್ನು ಎಲ್ಲರೂ ಪ್ರಶಂಸಿಸಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಪರಿಸರ ಪ್ರೇಮವನ್ನು ವೃದ್ಧಿಸುವಲ್ಲಿ ಸಹಾಯಕವಾಗುತ್ತವೆ ಎಂದು ಅಭಿಪ್ರಾಯಪಟ್ಟರು.

- Advertisement -

Related news

error: Content is protected !!