- Advertisement -
- Advertisement -



ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ದೋಟಿಕೊಳ್ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವನ್ನಪ್ಪಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ದೋಟಿಕೊಳ ಗ್ರಾಮದ ಜಮೀನಿನಲ್ಲಿ ಮಲಗಿದ ಯುವಕ ಅನುಮಾನಾಸ್ಪದವಾಗಿ ಸಾವಾಗಿದ್ದಾನೆ. ಶರಣು ಭಾಸಗಿ (25) ಮೃತ ಯುವಕ. ಹೊಲದಲ್ಲಿ ಬೆಳೆ ಕಾಯಲು ಜಮೀನಿನಲ್ಲಿಯೇ ಮಲಗಿದ್ದ. ದೋಟಿಕೋಳ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ, ಶ್ವಾನದಳದ ಪರಿಶೀಲನೆ ನಡೆಸಿದ್ದಾರೆ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








