Tuesday, July 21, 2026
spot_imgspot_img
spot_imgspot_img

ಅಬುಧಾಬಿಯಿಂದ ತಾಯ್ನಾಡಿಗೆ ಬಂದ ಕನ್ನಡಿಗರು – 2 ವಿಮಾನಗಳಲ್ಲಿ 500 ಕ್ಕೂ ಹೆಚ್ಚು ಮಂದಿ ಬೆಂಗಳೂರಿಗೆ

- Advertisement -
- Advertisement -

ಬೆಂಗಳೂರು: ಇಸ್ರೇಲ್‌-ಇರಾನ್‌ ಯುದ್ಧದಿಂದಾಗಿ ರದ್ದಾಗಿದ್ದ ವಿಮಾನಯಾನ ಸೇವೆ ಸೋಮವಾರದಿಂದ ಆರಂಭವಾಗಿದ್ದು, ಸಾಕಷ್ಟು ಕನ್ನಡಿಗರು ತಾಯ್ನಾಡಿಗೆ ಮರಳಿದ್ದಾರೆ. ಅಬುಧಾಬಿಯಿಂದ ಬೆಂಗಳೂರಿಗೆ ಬಂದ 2 ವಿಮಾನಗಳಲ್ಲಿ ಹಂತ ಹಂತವಾಗಿ 500 ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಸೋಮವಾರ ರಾತ್ರಿ 10 ಗಂಟೆ ಹೊತ್ತಿಗೆ ಅಬುಧಾಬಿಯಿಂದ ಬಂದ ವಿಮಾನದಲ್ಲಿ 210 ಪ್ರಯಾಣಿಕರು ಸೇಫಾಗಿ ಲ್ಯಾಂಡ್‌ ಆಗಿದ್ದರು. ಮಂಗಳವಾರ ಬೆಳಗ್ಗಿನ ಜಾವ 3:20 ಕ್ಕೆ ಅಬುಧಾಬಿಯಿಂದ ಬಂದ ವಿಮಾನದಲ್ಲಿ 300 ಕ್ಕೂ ಹೆಚ್ಚು ಕನ್ನಡಿಗರು ತಾಯ್ನಾಡಿಗೆ ಮರಳಿದ್ದಾರೆ.

ಅಲ್ಲದೇ ದುಬೈನಲ್ಲಿ ಸಿಲುಕಿದ್ದ ಒಲಿಂಪಿಕ್ಸ್‌ ಪದಕ ವಿಜೇತೆ, ಭಾರತೀಯ ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು ಕೂಡ ದುಬೈನಿಂದ ಬೆಂಗಳೂರಿಗೆ ಸೇಫಾಗಿ ಮರಳಿದ್ದಾರೆ.ಯುದ್ಧದ ಪರಿಸ್ಥಿತಿಯಿಂದಾಗಿ ಮಧ್ಯಪ್ರಾಚ್ಯ ದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ದುಬೈ, ಅಬುಧಾಬಿ, ರಿಯಾದ್‌, ಜೆಡ್ಡಾ, ದೋಹಾ ಮತ್ತಿತರ ನಗರಗಳ ವಾಯುಪ್ರದೇಶಗಳನ್ನ ನಿರ್ಬಂಧಿಸಲಾಗಿತ್ತು. ಈ ಕಾರಣದಿಂದಾಗಿ ಶನಿವಾರದಿಂದ ಮಧ್ಯಪ್ರಾಚ್ಯದಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳ ಹಾರಾಟವನ್ನ ಸ್ಥಗಿತಗೊಳಿಸಲಾಗಿತ್ತು. ಸೋಮವಾರ ಬೆಳಗ್ಗೆಯಿಂದ ಪರಿಸ್ಥಿತಿ ಆಧರಿಸಿ ವಿಮಾನ ಸೇವೆ ಮರುಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!