- Advertisement -
- Advertisement -
ಮಾಜಿ ಯೋಧ ಸಜೀವ ದಹನ



ಮಡಿಕೇರಿ: ಮನೆಯೊಳಗಿಟ್ಟಿದ್ದ ಪೆಟ್ರೋಲ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಾಜಿ ಸಿಆರ್‌ಪಿಎಫ್ ಯೋಧ ಸಾವಿಗೀಡಾದ ಘಟನೆ ತೋಳುರುಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.ಮೃತರನ್ನು ಹೆಚ್.ಎ.ವೆಂಕಟೇಶ್(64) ಎಂದು ಗುರುತಿಸಲಾಗಿದೆ.
ತೋಟದ ಯಂತ್ರಗಳ ಬಳಕೆಗೆ ತಂದಿಟ್ಟಿದ್ದ ಪೆಟ್ರೋಲ್‍ಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಬೆಂಕಿಯ ಕೆನ್ನಾಲಿಯಿಂದ ಹೊರ ಬರಲಾಗದೆ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ. ಮನೆಯಿಂದ ದಟ್ಟ ಹೊಗೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮನೆ ಬಳಿ ಬಂದು ನೋಡಿದ್ದಾರೆ. ಈ ವೇಳೆ ಬೆಂಕಿ ನಂದಿಸಲು ಯತ್ನಿಸಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸೋಮವಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








