Wednesday, July 22, 2026
spot_imgspot_img
spot_imgspot_img

ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು

- Advertisement -
- Advertisement -

ಸಕಲೇಶಪುರ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆಸರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಓಂನಗರದಲ್ಲಿ ಶನಿವಾರ ಸಂಭವಿಸಿದೆ.ಮೃತರನ್ನು ಭರತ್ (18) ಮತ್ತು ಮಿಥುನ್ (19) ಎಂದು ಗುರುತಿಸಲಾಗಿದೆ.

ಇವರು ಪಾಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಮಿಥುನ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಭರತ್ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದನು.

ನಾಲ್ವರು ಸ್ನೇಹಿತರು ಸಮೀಪದ ಪ್ರಕಾಶ್ ಎಂಬವರ ಕಾಫಿ ತೋಟದಲ್ಲಿರುವ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ಭರತ್ ಮತ್ತು ಮಿಥುನ್ ಕೆರೆಯೊಳಗಿನ ಕೆಸರಿನಲ್ಲಿ ಸಿಲುಕಿ ಮುಳುಗಿದ್ದಾರೆ ಎನ್ನಲಾಗಿದೆ. ಇಬ್ಬರು ಮುಳುಗುತ್ತಿರುವುದನ್ನು ಕಂಡ ಉಳಿದ ಇಬ್ಬರು ವಿದ್ಯಾರ್ಥಿಗಳು ಭಯಗೊಂಡು ಕೆರೆಯಿಂದ ಹೊರಬಂದಿದ್ದಾರೆ. ನಂತರ ಸ್ಥಳೀಯರು ಕೆರೆಯಲ್ಲಿ ಶೋಧ ಕಾರ್ಯ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದರು. ಘಟನೆಯ ಮಾಹಿತಿ ತಿಳಿದು ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!