Thursday, July 23, 2026
spot_imgspot_img
spot_imgspot_img

ಮೂಕ ಮಹಿಳೆಗೆ ಲೈಂಗಿಕ ಕಿರುಕುಳ: ಆರೋಪಿಗೆ ₹5001 ದಂಡ, ತಲೆ ಬೋಳಿಸಿ ಗ್ರಾಮದಲ್ಲಿ ಮೆರವಣಿಗೆ

- Advertisement -
- Advertisement -

ಮುಝಫರ್‌ಪುರ: ಬಿಹಾರದ ಮುಝಪ್ಪರ್‌ಪುರ ಜಿಲ್ಲೆಯಲ್ಲಿ ಮೂಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವರಿಗೆ ಗ್ರಾಮಸ್ಥರು ಸಾರ್ವಜನಿಕವಾಗಿ ಶಿಕ್ಷೆ ವಿಧಿಸಿದ್ದಾರೆ.ಆತನಿಗೆ 5001 ರೂ. ದಂಡ ವಿಧಿಸಿದ್ದಾರೆ. ಅಲ್ಲದೆ, ತಲೆ ಬೋಳಿಸಿ ಮೆರವಣಿಗೆ ಮಾಡಿದ್ದಾರೆ.

ಈ ಘಟನೆ ಕುರಿತ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಇದೀಗ ಪೊಲೀಸರ ಗಮನಕ್ಕೆ ಬಂದಿದೆ.

ಸ್ಥಳೀಯ ಮೂಲಗಳ ಪ್ರಕಾರ, ಆರೋಪಿ ಅದೇ ಗ್ರಾಮದ ಮೂಕ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಘಟನೆಯ ಬಗ್ಗೆ ಮಹಿಳೆಯ ಕುಟುಂಬ ಹಾಗೂ ಗ್ರಾಮಸ್ಥರಿಗೆ ತಿಳಿಸಿದಾಗ ಆವರು ಆತನನ್ನು ಸೆರೆ ಹಿಡಿದ್ದಾರೆ. ಸ್ವಲ್ಪ ಸಮಯದ ನಂತರ ಆತನಿಗೆ ಶಿಕ್ಷೆ ನಿರ್ಧರಿಸಲು ಗ್ರಾಮ ಸಭೆಯನ್ನು ಕರೆದಿದ್ದಾರೆ. ಗ್ರಾಮ ಸಭೆ ಆರೋಪಿಗೆ 5,001 ರೂ. ದಂಡ ವಿಧಿಸಿದೆ. ಬಳಿಕ ಗ್ರಾಮಸ್ಥರು ಆತನ ತಲೆ ಬೋಳಿಸಿ, ಆತನ ಹಣೆಗೆ ಕಪ್ಪು ಗುರುತು ಮಾಡಿ, ಗ್ರಾಮದಲ್ಲಿ ಸಾರ್ವಜನಿಕ ಮೆರವಣಿಗೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ವೈರಲ್ ಆಗಿರುವ ವೀಡಿಯೊ ದೃಶ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಪೂರ್ವ-1 ಡಿಎಸ್‌ಪಿ ಅಲಯ್ ವಾಟ್ಸ್ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊವನ್ನು ಪೊಲೀಸರು ಸ್ವಯಂಪ್ರೇರಿತವಾಗಿ ಗಮನಕ್ಕೆ ತೆಗೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಪರಿಶೀಲಿಸಲಾಗುತ್ತಿದೆ. ಆರೋಪ ಸತ್ಯವೆಂದು ಕಂಡು ಬಂದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ

- Advertisement -

Related news

error: Content is protected !!