- Advertisement -
- Advertisement -



ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದ ದಂಪತಿ ಮೇಲೆ ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ದ್ಯಾವಪ್ಪ (38)ಸೂಗುರು ಆತನ ಪತ್ನಿ ಶಿವಮ್ಮ (32) ಮೃತ ದುರ್ದೈವಿಗಳು. ಗೌಂಡಿ ಕೆಲಸ ಮಾಡುತ್ತಿದ್ದ ದಂಪತಿಗಳ ಮೇಲೆ ಏಕಾಏಕಿ ಮೆಟ್ಟಿಲು ಕುಸಿದು ಬಿದ್ದಿದೆ. ಗೌಂಡಿ ಕೆಲಸ ಮಾಡುತ್ತಿದ್ದ ಪಕ್ಕದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವನ್ನಪ್ಪಿದ್ದಾರೆ.
ಪಿಲ್ಲರ್ ಇಲ್ಲದೆ ಅವೈಜ್ಞಾನಿಕವಾಗಿ ನಿರ್ಮಿಸಿದ್ದ ಮೆಟ್ಟಿಲು ಕುಸಿತವಾಗಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








