- Advertisement -
- Advertisement -



ಉಳ್ಳಾಲ: ಅಪರಿಚಿತ ವಾಹನ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಕುತ್ತಾರ್ ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮುನ್ನೋಳಿ ನಿವಾಸಿ ದಿನೇಶ್ ಗಟ್ಟಿ (50) ಮೃತ ಪಟ್ಟವರು.
ದಿನೇಶ್ ಗಟ್ಟಿ ಅವರು ಮಂಗಳವಾರ ರಾತ್ರಿ ಅಂಗಡಿಗೆ ತೆರಳಿದ್ದ ವೇಳೆ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಬೈಕ್ ಸವಾರನೊಬ್ಬ ಢಿಕ್ಕಿ ಹೊಡೆದು ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಕೃಷಿಕರಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.
- Advertisement -








