Sunday, July 26, 2026
spot_imgspot_img
spot_imgspot_img

ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಶಿವಕಿರಣ್ ಬೈಪದವು ಆಯ್ಕೆ

- Advertisement -
- Advertisement -

ವಿಟ್ಲ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಶಿವಕಿರಣ್ ಬೈಪದವುರವರು ಆಯ್ಕೆಯಾಗಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಅವರ ಮಾರ್ಗದರ್ಶನ ಹಾಗೂ ಆದೇಶದ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಅವರು ಜಿಲ್ಲಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಶಿವ ಕಿರಣ್ ಬೈಪದವುರವರನ್ನು ಆಯ್ಕೆ ಮಾಡಿದ್ದಾರೆ.

ಸಂಘಟನೆಯನ್ನು ಬಲಪಡಿಸುವ ದೃಷ್ಟಿಯಿಂದ ಜಿಲ್ಲೆಯ ವಿವಿಧ ಭಾಗಗಳ ಯುವ ಕಾರ್ಯಕರ್ತರಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ. ಶಿವಕಿರಣ್ ರವರು ಈ ಭಾಗದಲ್ಲಿ ಪಕ್ಷ ಸಂಘಟನೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿರುವ ನಿಟ್ಟಿನಲ್ಲಿ ಅವರಿಗೆ ಜವಾಬ್ದಾರಿ ನೀಡಲಾಗಿದೆ‌. ಇವರು ಇಡ್ಕಿದು ಸೇವಾಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಬೈಪದವುರವರ ಪುತ್ರರಾಗಿದ್ದಾರೆ.

- Advertisement -

Related news

error: Content is protected !!