Monday, September 14, 2026
spot_imgspot_img
spot_imgspot_img

ಮಡಿಕೇರಿ: ಹಲವರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆ ಕೊನೆಗೂ ಸೆರೆ!

- Advertisement -
- Advertisement -

ಮಡಿಕೇರಿ: ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಹಲವರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ.

35 ವರ್ಷದ ಕಾಡಾನೆ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಉಪಟಳ ನೀಡುತ್ತಿತ್ತು. ಸಿದ್ದಾಪುರ ಸಮೀಪ ಕಾಫಿ ಬೆಳೆಗಾರರೊಬ್ಬರನ್ನು ಇತ್ತೀಚೆಗೆ ಬಲಿ ತೆಗೆದುಕೊಂಡಿತ್ತು. ಗ್ರಾಮಸ್ಥರು ಕಾಡಾನೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿಯನ್ನೂ ಮಾಡಿದ್ದರು.

ಬೆಳಗ್ಗೆಯಿಂದಲೇ 6 ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದು, ಸಿದ್ದಾಪುರ, ಪಾಲಿಬೆಟ್ಟ, ಅಮ್ಮತ್ತಿ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಹುಡುಕಾಟ ನಡೆಸಿದ್ದರು. ಚೆನ್ನೈನ ಕೋಟೆ ಬಾಡಗ ಬಾಣಂಗಾಲ ಸಮೀಪದ ಕಾಫಿ ತೋಟದಲ್ಲಿ ಒಂಟಿ ಸಲಗ ಪತ್ತೆಯಾಗಿತ್ತು.

ಅರವಳಿಕೆ ನೀಡಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದು, ಕಾಡಾನೆ ಸೆರೆಯಿಂದ ಗ್ರಾಮಸ್ಥರು ನೆಟ್ಟುಸಿರು ಬಿಟ್ಟಿದ್ದಾರೆ.

- Advertisement -

Related news

error: Content is protected !!