Tuesday, July 21, 2026
spot_imgspot_img
spot_imgspot_img

ನೆಲಮಂಗಲ: ಎಲ್‌ಪಿಜಿ ಟ್ಯಾಂಕರ್‌ ಪಲ್ಟಿ- ತಪ್ಪಿದ ಅನಾಹುತ

- Advertisement -
- Advertisement -

ಬೆಂಗಳೂರು: ಎಲ್‌ಪಿಜಿ ಗ್ಯಾಸ್ ತುಂಬಿದ ಟ್ಯಾಂಕರ್ ಪಲ್ಟಿಯಾದ ಘಟನೆ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಸೋಲೂರು ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್‌ ಪಲ್ಟಿಯಾಗಿದೆ.

ಸ್ಥಳಕ್ಕೆ ಮಾಗಡಿಯ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಕುದೂರು ಪೊಲೀಸರು ಹಾಗೂ ರಾಷ್ಟ್ರೀಯ ಹೆದ್ದಾರಿ ಟೋಲ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಎರಡು ಕ್ರೇನ್‌ ಬಳಸಿ ತೆರವು ಮಾಡಿದ್ದಾರೆ ಎನ್ನಲಾಗಿದೆ.

ಪಲ್ಟಿಯಾದ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗಿದ್ದರೆ ಭಾರೀ ಅನಾಹುತವಾಗುವ ಸಾಧ್ಯತೆ ಇತ್ತು. ಅದೃಷ್ಟವಶಾತ್ ಯಾವುದೇ ಸಮಸ್ಯೆ ಇಲ್ಲದೆ ಜಾಗೃತೆಯಿಂದ ಟ್ಯಾಂಕರ್‌ ಮೇಲಕ್ಕೆ ಎತ್ತಿದ್ದಾರೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!