Wednesday, July 22, 2026
spot_imgspot_img
spot_imgspot_img

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ, ಇಬ್ಬರಿಗೆ ಗಾಯ -ಆರೋಪಿಗಳ ಬಂಧನ

- Advertisement -
- Advertisement -

ಸುಳ್ಯ: ಮಾರ್ಚ್ 14ರಂದು ಸಂಜೆ ಶ್ರೀರಾಮ್ ಪೇಟೆಯಲ್ಲಿರುವ ರಾಜೇಶ್ ಬಾರ್‌ನಲ್ಲಿ ಶುಲ್ಲಕ ಕಾರಣಕ್ಕೆ ಇಬ್ಬರು ಯುವಕರು ಚೂರಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಈ ಘಟನೆಯಲ್ಲಿ ನಿತೇಶ್ ಆರ್.ಕೆ (33) ಮತ್ತು ಅವರ ಸ್ನೇಹಿತ ಹರೀಶ್ ಗಾಯಗೊಂಡಿದ್ದಾರೆ.

ಹಲ್ಲೆಯ ಪರಿಣಾಮವಾಗಿ ಹರೀಶ್ ಅವರ ಎಡ ಕುತ್ತಿಗೆಗೆ ಹಾಗೂ ಇಬ್ಬರ ಎಡ ಕೈಗಳಿಗೆ ಗಾಯಗಳಾಗಿವೆ. ಬಾರ್‌ನಲ್ಲಿದ್ದ ಇತರರು ತಕ್ಷಣವೇ ಹಲ್ಲೆ ತಡೆದು ಗಾಯಾಳುಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.31/2026 ಕಲಂ 118(1), 109 r/w 3(5) BNS 2023ರಡಿ ಪ್ರಕರಣ ದಾಖಲಿಸಲಾಗಿದೆ. ಅಜ್ಜಾವರ ಗ್ರಾಮದ ರಾಜೇಶ್ ಬಿ.ಆರ್ (27) ಮತ್ತು ದಯಾನಂದ್ (30) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!