- Advertisement -
- Advertisement -
ಬೆಂಗಳೂರು: ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು ಎಂದು ಹೈಕೋರ್ಟ್ ತಿಳಿಸಿದೆ.ಇಂದು ನಡೆದ ವಿಚಾರಣೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1 ರಿಂದ ವಿದ್ಯಾಗಮ ಆರಂಭವಾಗಲಿದೆ.
ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲೂ 6 ರಿಂದ 9 ನೇ ತರಗತಿಗಳಿಗೆ ವಿದ್ಯಾಗಮ ಜಾರಿ ಮಾಡಲಾಗುತ್ತದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್ ಗೆ ಹೇಳಿದ್ದಾರೆ. ಸರ್ಕಾರದ ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್ ಈ ನಿರ್ಧಾರಕ್ಕೆ ಬದ್ದವಾಗಿರುವಂತೆ ಸೂಚನೆ ನೀಡಿದೆ. ಶಾಲೆ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು ಎಂದು ಕೋರ್ಟ್ ಹೇಳಿದೆ.
- Advertisement -