- Advertisement -
- Advertisement -




ದುಬೈ: ಇರಾನ್ ಡ್ರೋನ್ ದಾಳಿಗೆ ದುಬೈ ವಿಮಾನ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.
ವಿಮಾನ ನಿಲ್ದಾಣದ ಸಮೀಪವಿರುವ ಇಂಧನ ಟ್ಯಾಂಕ್‌ಗೆ ಡೋನ್ ಡಿಕ್ಕಿ ಹೊಡೆದಿದ್ದು, ಇದರಿಂದ ಭಾರಿ ಬೆಂಕಿ ಕಾಣಿಸಿಕೊಂಡಿದೆ. ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ.
ಪ್ರಯಾಣಿಕರ ಮತ್ತು ಸಿಬ್ಬಂದಿಯ ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಸುತ್ತಮುತ್ತ ಸುರಕ್ಷತಾ ಕ್ರಮಗಳನ್ನು ಸಕ್ರಿಯಗೊಳಿಸಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುಬೈ ನಾಗರಿಕ ರಕ್ಷಣಾ ತಂಡಗಳು ತಕ್ಷಣ ಪ್ರತಿಕ್ರಿಯಿಸಿ ಬೆಂಕಿಯನ್ನು ನಂದಿಸುವ ಕೆಲಸ ಮಾಡುತ್ತಿವೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕಚೇರಿ ದೃಢಪಡಿಸಿದೆ ಎಂದು ಮೂಲಗಳು ತಿಳಿಸಿವೆ.
- Advertisement -








