
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೋಮವಾರ ವಿಧಾನಸಭೆಯಲ್ಲಿ ಮಂಡಿಸಿದ 2026ನೆ ಸಾಲಿನ ಕರ್ನಾಟಕ ಪೊಲೀಸ್ (ತಿದ್ದುಪಡಿ) ವಿಧೇಯಕಕ್ಕೆ ಅಂಗೀಕಾರ ಲಭಿಸಿತು.ಕರ್ತವ್ಯ ಲೋಪ, ದುರ್ನಡತೆ ಅಥವಾ ಅಶಿಸ್ತು ತೋರುವ ಡಿವೈಎಸ್ಪಿ ಶ್ರೇಣಿಯವರೆಗಿನ ಅಧಿಕಾರಿಗಳನ್ನು ಸರಕಾರದ ಪೂರ್ವಾನುಮತಿಗಾಗಿ ಕಾಯದೆ ನೇರವಾಗಿ ವರ್ಗಾವಣೆ ಮಾಡುವ ಅಧಿಕಾರವನ್ನು ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಬೋರ್ಡ್‌ಗೆ ನೀಡಲು ಈ ವಿಧೇಯಕ್ಕೆ ತಿದ್ದುಪಡಿ ತರಲಾಗಿದೆ ಎಂದು ಪರಮೇಶ್ವರ್ ಹೇಳಿದರು.


ಕನಿಷ್ಠ ಅವಧಿಯ ವಿನಾಯಿತಿ: ಈ ಮೊದಲು ಯಾವುದೇ ಅಧಿಕಾರಿಯನ್ನು ವರ್ಗಾಯಿಸಲು ಕನಿಷ್ಠ ಎರಡು ವರ್ಷಗಳ ಕಾಲಾವಕಾಶ ಇರಬೇಕಿತ್ತು. ಆದರೆ ಹೊಸ ತಿದ್ದುಪಡಿಯ ಪ್ರಕಾರ, ಗಂಭೀರ ಲೋಪಗಳು ಕಂಡುಬಂದಲ್ಲಿ ಈ ಕನಿಷ್ಠ ಎರಡು ವರ್ಷಗಳ ಕಾಲಾವಕಾಶ ಇರಬೇಕಿತ್ತು.

ಆದರೆ ಹೊಸ ತಿದ್ದುಪಡಿಯ ಪ್ರಕಾರ, ಗಂಭೀರ ಲೋಪಗಳು ಕಂಡುಬಂದಲ್ಲಿ ಈ ಕನಿಷ್ಠ ಅವಧಿಯ ನಿಯಮ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.ವಿಧೇಯಕದ ಉದ್ದೇಶಗಳು ಶಿಸ್ತು ಪಾಲನೆ:ಪೊಲೀಸ್ ಇಲಾಖೆಯಲ್ಲಿ ಪಾರದರ್ಶಕತೆ ತರುವುದು ಮತ್ತು ಭ್ರಷ್ಟಾ ಚಾರ ಅಥವಾ ಕರ್ತವ್ಯದ ನಿರ್ಲಕ್ಷ್ಯವನ್ನು ತಡೆಯುವುದು. ವರ್ಗಾವಣೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಇಲಾಖೆಯ ಉನ್ನತ ಮಟ್ಟದ ಸಮಿತಿಯ ಸುಪರ್ದಿಗೆ ನೀಡುವುದರಿಂದ ರಾಜಕೀಯ ಪ್ರಭಾವವನ್ನು ಕಡಿಮೆ ಮಾಡುವುದಾಗಿದೆ ಎಂದು ಪರಮೇಶ್ವರ್ ತಿಳಿಸಿದರು.ಪೊಲೀಸ್ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಉತ್ತಮ ಸಂಬಂಧ ಹೊಂದಲು ಮತ್ತು ಅಪರಾಧ ತಡೆಗಟ್ಟುವಿಕೆಯಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಲು ಈ ಕ್ರಮ ಪೂರಕವಾಗಲಿದೆ ಎಂದು ಅವರು ತಿಳಿಸಿದರು. ಆನಂತರ, ವಿಧೇಯಕವನ್ನು ಒಮ್ಮತದಿಂದ ಅಂಗೀಕರಿಸಲಾಯಿತು.









