Tuesday, July 21, 2026
spot_imgspot_img
spot_imgspot_img

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳದಲ್ಲೇ ಸಾವು

- Advertisement -
- Advertisement -

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತರನ್ನು ಕೇರಳ ಮೂಲದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್‌(45), ಸಕೀರ್ (27) ಎಂದು ಗುರುತಿಸಲಾಗಿದೆ. ಕೇರಳ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಹಣದ ಆಸೆಗೆ ಬಸ್ ಡ್ರೈವರ್, ಸೀಟ್ ಇಲ್ಲದಿದ್ರೂ ಮುಂಭಾಗದ ಕ್ಯಾಬಿನಲ್ಲಿ ನಾಲ್ವರನ್ನೂ ಕೂರಿಸಿದ್ದರಿಂದ ಅಪಘಾತದ ರಭಸಕ್ಕೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!