Monday, August 10, 2026
spot_imgspot_img
spot_imgspot_img

5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

- Advertisement -
- Advertisement -

ಬೆಳ್ತಂಗಡಿ: ಮಾನ್ಯ ಬೆಳ್ತಂಗಡಿ ನ್ಯಾಯಾಲಯದ CC No. 356/2019 ಪ್ರಕರಣದಲ್ಲಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ವೇಣೂರು ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಉಡುಪಿ ಜಿಲ್ಲೆಯ ಕಾಪು ನಿವಾಸಿ ಮಣಿಕಂಠ (35) ಎಂದು ಗುರುತಿಸಲಾಗಿದೆ. ಈತನನ್ನು ಉಡುಪಿಯಲ್ಲಿ ಪತ್ತೆಹಚ್ಚಿ ದಸ್ತಗಿರಿ ಮಾಡಿದ ಪೊಲೀಸರು, ಬಳಿಕ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!