Monday, September 14, 2026
spot_imgspot_img
spot_imgspot_img

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು – ಸುಪ್ರೀಂ ಕೋರ್ಟ್

- Advertisement -
- Advertisement -

ನವದೆಹಲಿ: ಪರಿಶಿಷ್ಟ ಜಾತಿ ಸ್ಥಾನಮಾನದ ಕುರಿತು ಸುಪ್ರೀಂ ಕೋರ್ಟ್‌ ಇಂದು (ಮಂಗಳವಾರ) ಐತಿಹಾಸಿಕ ತೀರ್ಪು ಪ್ರಕಟಿಸಿದ್ದು, ಹಿಂದೂ, ಸಿಖ್‌, ಬೌದ್ಧ ಧರ್ಮ ಹೊರತುಪಡಿಸಿ ಬೇರೆ ಧರ್ಮಗಳಿಗೆ ಮತಾಂತರಗೊಂಡವರು ಪರಿಶಿಷ್ಟ ಜಾತಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಆಂಧ್ರಪ್ರದೇಶ ಹೈಕೋರ್ಟ್ 2025ರ ಮೇ ತಿಂಗಳಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಪಾದ್ರಿ ಒನ್ ಚಿಂತದ ಆನಂದ್‌ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ಕೆ ಮಿಶ್ರಾ ಮತ್ತು ಮನಮೋಹನ್‌ ಅವರಿದ್ದ ದ್ವಿಸದಸ್ಯ ಪೀಠವು ಈ ತೀರ್ಪು ಪ್ರಕಟಿಸಿದೆ.

ಬೇರೆ ಧರ್ಮವನ್ನು ಪ್ರತಿಪಾದಿಸುವ ಯಾರನ್ನೂ ಪರಿಶಿಷ್ಟ ಜಾತಿ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಪೀಠ ಹೇಳಿದ್ದು, ಹಿಂದೂ ಧರ್ಮ, ಸಿಖ್ ಅಥವಾ ಬೌದ್ಧ ಧರ್ಮವನ್ನ ಪ್ರತಿಪಾದಿಸುವ ಪರಿಶಿಷ್ಟ ಜಾತಿ(ಎಸ್‌ಸಿ) ವ್ಯಕ್ತಿಯು ಬೇರೆ ಧರ್ಮಕ್ಕೆ ಮತಾಂತರಗೊಂಡರೆ, ಅವರ ಪರಿಶಿಷ್ಟ ಜಾತಿ ಸ್ಥಾನಮಾನವನ್ನ ತಕ್ಷಣವೇ ಮತ್ತು ಸಂಪೂರ್ಣವಾಗಿ ರದ್ದುಗೊಳಿಸಲಾಗುತ್ತದೆ. 1950 ರ ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶವು ಇದನ್ನು ಸ್ಪಷ್ಟಪಡಿಸಿದೆ.

ಈ ಆದೇಶದ ಅಡಿಯಲ್ಲಿ ನಿಷೇಧವು ಸಂಪೂರ್ಣವಾಗಿ ಜಾರಿಯಲ್ಲಿದೆ. 1950 ರ ಆದೇಶದ ಷರತ್ತು 3 ರಲ್ಲಿ ನಿರ್ದಿಷ್ಟಪಡಿಸಿದ ಧರ್ಮಗಳನ್ನ ಹೊರತುಪಡಿಸಿ ಯಾವುದೇ ಧರ್ಮವನ್ನು ಅಳವಡಿಸಿಕೊಳ್ಳುವುದರಿಂದ, ಜನ್ಮ ಸ್ಥಾನಮಾನವನ್ನ ಲೆಕ್ಕಿಸದೆ, ಪರಿಶಿಷ್ಟ ಜಾತಿ ಸ್ಥಾನಮಾನವನ್ನು ತಕ್ಷಣವೇ ಆತ ಕಳೆದುಕೊಳ್ಳುತ್ತಾನೆ ಎಂಬುದಾಗಿ ನ್ಯಾಯಪೀಠ ಸ್ಪಷ್ಟಪಡಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!