Wednesday, July 22, 2026
spot_imgspot_img
spot_imgspot_img

1200ರಿಂದ 80 ರೂ.ಗೆ ಕುಸಿದ ಟೊಮ್ಯಾಟೋ ಬೆಲೆ – ರೈತರು ಕಂಗಾಲು

- Advertisement -
- Advertisement -

ವಿಜಯನಗರ: ಜಿಲ್ಲೆಯಲ್ಲಿ ಟೊಮ್ಯಾಟೋ ಬೆಲೆ ಏಕಾಏಕಿ ಪಾತಾಳಕ್ಕೆ ಕುಸಿದಿದೆ. 1000-1200 ರೂ. ಇದ್ದ ಒಂದು ಬಾಕ್ಸ್ ಟೊಮ್ಯಾಟೋ ಬೆಲೆ 100-80 ರೂ.ಗೆ ಕುಸಿದಿದೆ. ಬೆಲೆ ಕುಸಿತದಿಂದ ರೈತರು ಹಾಗೂ ಮಾರಾಟಗಾರರು ನಷ್ಟ ಅನುಭವಿಸುತ್ತಿದ್ದಾರೆ.

ವ್ಯಾಪಾರಿಗಳು 20 ರೂ.ಗೆ 2 ರಿಂದ 4 ಕೆಜಿ ಟೊಮ್ಯಾಟೋವನ್ನು ಮಾರಾಟ ಮಾಡುತ್ತಿದ್ದಾರೆ. ಏಕಾಏಕಿ ಟೊಮ್ಯಾಟೋ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ.

ಇರಾನ್ – ಇಸ್ರೇಲ್ ಯುದ್ಧದಿಂದ ಬೇರೆ ದೇಶಗಳಿಗೆ ಟೊಮ್ಯಾಟೋ ರಫ್ತಾಗುತ್ತಿಲ್ಲ. ಅಲ್ಲದೇ ಸಿಲಿಂಡರ್ ಸಿಗದೇ ಹೋಟೆಲ್‍ಗಳು ಸರಿಯಾಗಿ ನಡೆಯದ ಹಿನ್ನೆಲೆ ಟೊಮ್ಯಾಟೋ ವ್ಯಾಪಾರ ಕುಸಿದಿದೆ. ಇದೇ ಕಾರಣಕ್ಕೆ ಟೊಮ್ಯಾಟೋ ಬೆಲೆ ಸಹ ಕುಸಿದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!