- Advertisement -
- Advertisement -





ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾ.27) ಸಂಜೆ 6.30ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.
ಈ ಮೂಲಕ ಸಭೆಯಲ್ಲಿ ದೇಶದ ಒಟ್ಟಾರೆ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸುವ ಮುಖ್ಯ ಉದ್ದೇಶವನ್ನು ಹೊಂದಿದೆ. ಆದರೆ ಏಪ್ರಿಲ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕೆಲ ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಸಂಹಿತೆ ಕಾರಣದಿಂದ ಈ ಸಭೆಯಲ್ಲಿ ಭಾಗವಹಿಸುವುದಿಲ್ಲ. ಹೀಗಾಗಿ ಬದಲಿಗೆ, ಆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಪ್ರತ್ಯೇಕ ಸಭೆಯನ್ನು ಶೀಘ್ರದಲ್ಲೇ ನಡೆಸಲು ಯೋಜನೆಯಿದೆ. ಇನ್ನೂ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸುತ್ತಾರೋ ಇಲ್ಲವೋ ಅನ್ನೋದು ಕುತೂಹಲ ಕೆರಳಿಸಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








