Wednesday, July 22, 2026
spot_imgspot_img
spot_imgspot_img

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಪ್ರಕರಣ: ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು: ಜನವರಿ ತಿಂಗಳಲ್ಲಿ ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಕಿರಾತ್ (ಕುರಾನ್ ಪಠಣ) ಸ್ಪರ್ಧೆಯ ವಿಡಿಯೋ ಸಾಮಾಜಿಕ ಜಾಲತಾಣವಾದ ಉದಯವಾಣಿ ಫೇಸ್‌ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದ ವೇಳೆ, ಪ್ರಚೋದನಕಾರಿ ಕಾಮೆಂಟ್‌ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಫೇಸ್‌ಬುಕ್ ಖಾತೆಯ ಮೂಲಕ ಕೋಮು ಪ್ರಚೋದನೆ ಉಂಟುಮಾಡುವ ಉದ್ದೇಶದಿಂದ ಕಾಮೆಂಟ್‌ ಮಾಡಲಾಗಿದೆ ಎಂಬ ಆರೋಪದ ಮೇರೆಗೆ ಅ.ಕ್ರ.15/2026ರಡಿ ಬಿ.ಎನ್.ಎಸ್ ಕಲಂ 196 ಹಾಗೂ ಐಟಿ ಕಾಯ್ದೆ 66ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ತನಿಖೆಯ ವೇಳೆ, ಕಾಮೆಂಟ್‌ಗಳನ್ನು ಹಾಕಿದ ವ್ಯಕ್ತಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಗಣೇಶ್ ಪ್ರಸಾದ್ (41) ಎಂದು ಪತ್ತೆಯಾಗಿದೆ. ಮಾರ್ಚ್ 27ರಂದು ಕಂಕನಾಡಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಲುವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!