- Advertisement -
- Advertisement -





ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಜಿ. ಹೊಸಳ್ಳಿ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಸೋಮವಾರ ನಡೆದಿದೆ.
ಜಿ. ಹೊಸಳ್ಳಿ ಗ್ರಾಮದ ನಿವಾಸಿ ಗುರುವಮ್ಮ(45) ಕಾಡಾನೆ ದಾಳಿಗೊಳಗಾದವರು.
ಗುರುವಮ್ಮ ಇಂದು ಬೆಳಗ್ಗೆ ಎಂದಿನಂತೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆಯೊಂದು ಏಕಾಏಕಿ ಅವರ ಮೇಲೆರಗಿದೆ. ಗಾಯಗೊಂಡಿರುವ ಅವರನ್ನು ಸ್ಥಳೀಯರು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
- Advertisement -








